ಡೆಹ್ರಾಡೂನ್, ಜೂ 05 (DaijiworldNews/SM): ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿಬಿದ್ದಿದ್ದು ಈ ದುರಂತದಲ್ಲಿ 17 ಮಂದಿ ಮೃತಪಟ್ಟಿದ್ದಾರೆ.
ಯಮುನೋತ್ರಿ ಕಡೆಗೆ ಪ್ರಯಾಣಿಸುತ್ತಿದ್ದ ಬಸ್ ಉತ್ತರಾಖಂಡದ ದಮ್ತಾದಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಕಮರಿಗೆ ಬಿದ್ದಿದ್ದು ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದು 15 ಮಂದಿ ಮೃತದೇಹ ಹೊರತೆಗೆಯಲಾಗಿದೆ. ಮಧ್ಯಪ್ರದೇಶದ ಯಾತ್ರಾರ್ಥಿಗಳು ಯಮುನೋತ್ರಿಗೆ ತೆರಲುತ್ತಿದ್ದರು. ಸದ್ಯ ಪೊಲೀಸರು ಮತ್ತು ಎಸ್ಡಿಆರ್ಎಫ್ ತಂಡಗಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಯಾತ್ರಾರ್ಥಿಗಳ ಸಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ. ಉತ್ತರಾಖಂಡದಲ್ಲಿ ಭಕ್ತರ ಬಸ್ ಕಮರಿಗೆ ಬಿದ್ದ ಬಗ್ಗೆ ಕೇಳಲು ತುಂಬಾ ದುಃಖವಾಗಿದೆ. ನಾನು ಈ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತ ಮತ್ತು ಎಸ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. NDRF ಕೂಡ ಶೀಘ್ರದಲ್ಲೇ ಅಲ್ಲಿಗೆ ತಲುಪುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.