ದೆಹಲಿ, ಜೂ 06 (DaijiworldNews/MS): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿರುವ ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿರುವ ಜೈನ್ ಅವರ ನಿವಾಸ ಹಾಗೂ ಇತರ ಕೆಲವು ಸ್ಥಳಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಕೋಲ್ಕತ್ತ ಮೂಲದ ಕಂಪನಿಯೊಂದರ ಹವಾಲ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಜಾರಿ ನಿರ್ದೇಶನಾಲಯವೂ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿ ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಜೂನ್ 9ರ ವರೆಗೆ ತನಿಖಾ ಸಂಸ್ಥೆಯ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು.
ಜೈನ್ ಬಂಧನ ಆಮ್ ಆದ್ಮಿ ಪಕ್ಷ ಹಾಗೂ ಕೇಂದ್ರ ಸರ್ಕಾರದ ನಡುವೆ ವಾಗ್ವಾದ ನಡೆದು ಇದು ರಾಜಕೀಯ ಆಯಾಮ ತಿರುವು ಪಡೆದುಕೊಂಡಿತ್ತು.