ಬೆಂಗಳೂರು, ಜೂ 06 (DaijiworldNews/HR): ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಯಚೂರು ನಗರದಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್, ನೂರ್ ಎಂಬುವರು ಮೃತಪಟ್ಟಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಮೃತಪಟ್ಟಿದ್ದು, ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದ್ದಾರೆ.
ಇನ್ನು 70 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.