ಮೈಸೂರು, ಜೂ 06 (DaijiworldNews/HR): ಇಬ್ರಾಹಿಂಗೆ ಮಾನ- ಮರ್ಯಾದೆ ಏನೂ ಇಲ್ಲ. ಅವರಿಗೆ ಜೆಡಿಎಸ್ ನಲ್ಲಿ ಸ್ವಾತಂತ್ರ್ಯ ಇಲ್ಲ. ಅವರೊಬ್ಬ ನಾಮಕೇವಾಸ್ತೆ ಅಧ್ಯಕ್ಷ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜೆಡಿಎಸ್ ನವರು ಇಬ್ರಾಹಿಂಗೆ ಏನು ಮಾಡಿದ್ದಾರೆ? ವಿಧಾನ ಪರಿಷತ್ತಿಗೆ ಕಳುಹಿಸಿದ್ದಾರಾ? ಏನೋ ಒಂದು ಹುದ್ದೆ ಕೊಟ್ಟಿದ್ದಾರೆಂದು ಬಾಯಿಗೆ ಬಂದಂತೆ ಮಾತನಾಡುತ್ತಾನೆ ಎಂದರು.
ಇನ್ನು ನಾವು ಅನೇಕ ಬಾರಿ ಜೆಡಿಎಸ್ ಗೆ ನೆರವಾಗಿಲ್ಲವೇ? ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವಾಗ ನಾವು ಬೆಂಬಲಿಸಲಿಲ್ಲವೇ? ಮೂವತ್ತೇಳು ಸ್ಥಾನ ಇದ್ದ ಜೆಡಿಎಸ್ ಗೆ ನಾವು ಸಿಎಂ ಸ್ಥಾನ ಕೊಡಲಿಲ್ಲವೇ? ಹೀಗೆ ಹಲವು ಬಾರಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಾವು ಜೆಡಿಎಸ್ ಗೆ ಸಹಕಾರ ಕೊಟ್ಟಿದ್ದೇವೆ ಎಂದಿದ್ದಾರೆ.