ರಾಯಚೂರು, ಜೂ 06 (DaijiworldNews/MS): ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿ, ಹಲವರು ಅಸ್ವಸ್ಥಗೊಂಡಿರುವ ಬೆನ್ನಲ್ಲೇ ಕರ್ತವ್ಯ ಲೋಪದ ಆರೋಪದಲ್ಲಿ ರಾಂಪುರ ನೀರು ಶುದ್ಧೀಕರಣ ಘಟಕದ ಜೆಇ ಅಮಾನತುಗೊಳಿಸಿ ಡಿಸಿ ಆದೇಶಿಸಿದ್ದಾರೆ.
ರಾಯಚೂರು ಜಿಲ್ಲೆಯ ರಾಂಪುರ ನೀರು ಶುದ್ಧೀಕರಣ ಘಟಕದ ವ್ಯಾಪ್ತಿಯಲ್ಲಿ ನಗರಸಭೆಯಿಂದ ಬಿಡಲಾಗಿದ್ದಂತ ನೀರು ಸೇವಿಸಿ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಅಲ್ಲದೇ ಮೂವರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಬಿಡುಗಡೆ ಮಾಡಿ, ಘಟನೆ ಬಗ್ಗೆ ತನಿಖೆಗೂ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದರು.
ರಾಂಪುರ ನೀರು ಶುದ್ಧೀಕರಣ ಘಟಕದಿಂದಲೇ ಈ ಅವಘಡಕ್ಕೆ ಮೂಲ ಕಾರಣ ಎಂದು ರಾಂಪುರ ಶುದ್ಧೀಕರಣ ಘಟಕದ ಜವಾಬ್ದಾರಿಯನ್ನು ಹೊತ್ತಿದ್ದಂತ ಜೆಇ ಕೃಷ್ಣ ಎಂಬುವರನ್ನು ರಾಯಚೂರು ಜಿಲ್ಲಾಧಿಕಾರಿ ಡಿ.ಚಂದ್ರಶೇಖರ್ ನಾಯಕ್ ಅವರು, ಕರ್ತವ್ಯ ಲೋಪ ಹಿನ್ನಲೆಯಲ್ಲಿ ಅಮಾನತಗೊಳಿಸಿ ಆದೇಶಿಸಿದ್ದಾರೆ.