ಶಿವಮೊಗ್ಗ, ಜೂ 06 (DaijiworldNews/HR): ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಗಳು ಮತ್ತೆ ಸದ್ದು ಮಾಡುತ್ತಿದ್ದು, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ ಎಂದರು.
ಇನ್ನು ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದೆ ಯಾರಿದ್ದಾರೆ ಹಾಗೂ ಯಾರ ಜತೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದರ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.