ಮುಂಬೈ, ಜೂ 06 (DaijiworldNews/MS): ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಒಂದು ದಿನದ ಮಟ್ಟಿಗೆ ತಾತ್ಕಾಲಿಕ ಜಾಮೀನು ಮಂಜೂರಾತಿಗೆ ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶ್ಮುಖ್ ಮತ್ತು ಸಚಿವ ನವಾಬ್ ಮಲಿಕ್ ಅರ್ಜಿ ಸಲ್ಲಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹಾಗೂ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸೋಮವಾರ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಒಂದು ದಿನದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಜೂನ್ 10 ರಂದು ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಯ ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಮತ ಚಲಾಯಿಸಲು ತಮಗೆ ಒಂದು ದಿನದ ಮಟ್ಟಿಗೆ ಜಾಮೀನು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.