ಹುಬ್ಬಳ್ಳಿ , ಜೂ 07(DaijiworldNews/MS): ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಇನ್ನೇನು ಸುಟ್ಟು ಹೋಗುತ್ತಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಆರೆಸ್ಸೆಸ್ ಗೆ ಕೈ ಹಾಕಿದ ನೆಹರೂ ಹಾಗೂ ಇಂದಿರಾ ಗಾಂಧಿ ಅವರು ಸುಟ್ಟು ಹೋಗಿದ್ದಾರೆ ಇನ್ನು ಮುಂದಿನ ಸರದಿ ಸಿದ್ದರಾಮಯ್ಯ ಅವರದ್ದು ಎಂದು ಹೇಳಿದ್ದಾರೆ
ರಾಜ್ಯದಲ್ಲಿ ನಡೆಯುತ್ತಿರುವ ಹಲವಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಆದರೆ ಆರೆಸ್ಸೆಸ್ ದೇಶಭಕ್ತರನ್ನು ನಿರ್ಮಾಣ ಮಾಡುತ್ತಿರುವ ಸೇವಾ ಸಂಸ್ಥೆಯಾಗಿದ್ದು ಇದಕ್ಕೆ ಕೈ ಹಾಕಿದ ನೆಹರೂ ಮತ್ತು ಇಂದಿರಾ ಗಾಂಧಿ ಸುಟ್ಟು ಹೋಗಿದ್ದಾರೆ. ರಾಜ್ಯ ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ. ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಾಕಲು ಸಿದ್ದರಾಮಯ್ಯ ಹೇಳಿದ್ದು ಇನ್ನು ಅವರೇ ಸುಟ್ಟು ಹೋಗುತ್ತಾರೆ ಎಂದು ಎಂದಿದ್ದಾರೆ.
ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ದರಾಮಯ್ಯ ಬೆಂಬಲ ಮಾಡಲ್ಲ, ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ.