ಬೆಂಗಳೂರು, ಜೂ. 07 (DaijiworldNews/DB): ಕಾಶ್ಮೀರ ಮೂಲದ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ತಾಲಿಬ್ ಹುಸೇನ್ (38) ಬಂಧಿತ ಉಗ್ರ. ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ ಈತ ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಬೆಂಗಳೂರಿನ ಶ್ರೀರಾಂಪುರದ ಮಸೀದಿ ಪಕ್ಕದಲ್ಲಿ ಬಾಡಿಗೆ ರೂಂನಲ್ಲಿ ವಾಸಿಸುತ್ತಿದ್ದ.
ಬೆಂಗಳೂರಿನಲ್ಲಿ ಈತನ ಇರುವಿಕೆ ಬಗ್ಗೆ ಮಾಹಿತಿ ಪಡೆದುಕೊಂಡ ಜಮ್ಮು ಕಾಶ್ಮೀರ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಮಾರು ಹತ್ತು ವರ್ಷಗಳ ಹಿಂದೆಯೇ ಈತ ಕಾಶ್ಮೀರದಿಂದ ಪಲಾಯನವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಎನ್ನಲಾಗಿದೆ. ಈತನೊಂದಿಗೆ ಪತ್ನಿ ಹಾಗೂ ಮೂವರು ಮಕ್ಕಳು ಕೂಡಾ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಬಿಎನ್ಎಲ್ಆರ್ನಲ್ಲಿ ಲೋಡಿಂಗ್, ಅನ್ ಲೋಡಿಂಗ್ ಕೆಲಸ ಮಾಡಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.