ಬೆಂಗಳೂರು,ಜೂ 07(DaijiworldNews/MS): ವಿಪಕ್ಷ ನಾಯಕನಾಗಿ, ಗೂಟದ ಕಾರಿನಲ್ಲಿ ಓಡಾಡಲು ಅಂದು ಸರ್ಕಾರ ತೆಗೆದು , ಇವತ್ತಿನ ಪಾಪದ ಸರ್ಕಾರದ ಜನಕಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣಕರ್ತರಾದರು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ನಮ್ಮ ಬಳಿ 32 ಮತಗಳಿದ್ದು ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್ ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಪಕ್ಷ ಸೋಲಬೇಕೆನ್ನುವುದು ನನ್ನ ಮೊದಲ ಅಜೆಂಡಾ, ಹೀಗಾಗಿ ಜೆಡಿಎಸ್ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡುತ್ತೇವೆ. ಕಾಂಗ್ರೆಸ್ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಲಿ. ಈ ಕಾರಣಕ್ಕಾಗಿಯೇ ನಾನು ಕಾಂಗ್ರೆಸ್ ಪಕ್ಷದೊಂದಿಗೆ ಮಾತುಕತೆ ನಡೆಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.