ಬೆಂಗಳೂರು, ಜೂ 07(DaijiworldNews/MS): ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೆಸ್ಸೆಸ್ ಹಾಗೂ ಚಡ್ಡಿ ಬಗ್ಗೆ ಮಾಡಿರುವ ಟೀಕೆಯೂ ಯಾರಿಗೂ ಶೋಭೆ ತರುವಂತಹದಲ್ಲ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರು ಗೌರವದಿಂದ ವರ್ತಿಸುತ್ತಾರೆ ಎಂಬ ನಿರೀಕ್ಷೆ ಮಾಡಿದ್ವಿ. ಅವರ ಹೇಳಿಕೆ , ಮಾಡುತ್ತಿರುವ ಟೀಕೆಯಿಂದ ಅವರ ಮೇಲೆರುವ ಗೌರವ ಹಾಳಾಗುವಂತೆ ಮಾಡುತ್ತಾರೆ ಎಂದಿದ್ದಾರೆ.
ಪಠ್ಯ ಪರಿಷ್ಕರಣೆಯಲ್ಲಿ ಲೋಪಗಳಾಗಿದ್ದರೆ, ಅದನ್ನು ಸರಿಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.