ನವದೆಹಲಿ, ಜೂ 09 (DaijiworldNews/HR): ಇಂದು ಕೇಂದ್ರ ಚುನಾವಣಾ ಆಯೋಗದಿಂದ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಜುಲೈ 18ರಂದು ಮತದಾನ ನಡೆದು ಜುಲೈ 21ರಂದು ಮತಏಣಿಕೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಮುಕ್ತಾಯಗೊಳ್ಳಲಿದ್ದು, ಜುಲೈ 18ರಂದು ಮತದಾನ ನಡೆದು ಜುಲೈ 21ರಂದು ಮತಏಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಒಟ್ಟು 776 ಎಂ.ಪಿ ಗಳಿದ್ದು, 4,033 ಎಂ ಎಲ್ ಎ ಗಳಿದ್ದಾರೆ. ಒಟ್ಟು 4,809 ಮಂದಿ ರಾಷ್ಟ್ರಪತಿ ಚುನಾವಣೆಗೆ ಮತದಾನ ಮಾಡಲಿದ್ದಾರೆ. ದೆಹಲಿಯ ಚುನಾವಣಾ ಆಯೋಗದಲ್ಲಿ ಮಾತ್ರವೇ ರಾಷ್ಟ್ರಪತಿ ಚುನಾವಣೆಗಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.
ಇನ್ನು ಮತದಾನದ ವೇಳೆ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಅಲ್ಲದೇ ಮತ ಏಣಿಕೆಯ ಸಂದರ್ಭದಲ್ಲಿಯೂ ಪಾಲಿಸಬೇಕು ಎಂದು ತಿಳಿಸಿದ್ದಾರೆ.