ರಾಯಚೂರು, ಜೂ 10 (DaijiworldNews/HR): ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮೃತ ಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಜನಕರಾಜ್ (48) ಇಂದು ಮೃತಪಟ್ಟಿದ್ದಾರೆ.
ರಾಯಚೂರು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು 80ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗಾಗಲೇ ಪ್ರಕರಣದಲ್ಲಿ ಜೆಇಯನ್ನು ಕರ್ತವ್ಯ ಲೋಪದ ಕಾರಣದಿಂದ ಅಮಾನತುಗೊಳಿಸಲಾಗಿದೆ.