ಬೆಂಗಳೂರು, ಜೂ 10 (DaijiworldNews/SM): ಕೊಂಚ ವಿರಾಮದ ಬಳಿಕ ಇದೀಗ ಮತ್ತೊಮ್ಮೆ ಕೊರೋನಾ ಏರಿಕೆಯ ಹಂತದಲ್ಲಿದ್ದು, ಸರಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲು ಮುಂದಾಗಿದೆ. ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಹೊಸ ಮಾರ್ಗಸೂಚಿಯಲ್ಲಿ ಏನಿದೆ?
1. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಸಲಾಗಿದೆ. ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವಂತೆ ಸೂಚಿಸಲಾಗಿದೆ.
2. ಶಾಪಿಂಗ್ ಮಾಲ್ಗಳು, ರೆಸ್ಟೋರೆಂಟ್ಗಳು, ಪಬ್ಗಳು, ಕೆಫೆಟೀರಿಯಾ, ಹೊಟೇಲ್ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ/ ಆಡಳತಗಳ ಜವಾಬ್ದಾರಿಯಾಗಿರುತ್ತದೆ.
3. ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ( ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.
4. ಲಕ್ಷಣಗಳನ್ನು ಹೊಂದಿದವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.