ಬಿಹಾರ, ಜೂ 11 (DaijiworldNews/DB): ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿಹಾರದ ರೌತಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಕಾರಿನಲ್ಲಿ ಒಟ್ಟು ಹತ್ತು ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದರೆ, ಇಬ್ಬರು ಅದೃಷ್ಟವಶಾತ್ ಬದುಕುಳಿದಿದ್ದಾರೆ. ಮೃತರೆಲ್ಲರೂ ಕಿಶನ್ಗಂಜ್ನ ನುನಿಯಾ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಸಂಬಂಧಿಕರೊಬ್ಬರ ವಿವಾಹ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಪೂರ್ನಿಯಾದ ಉಂಗಾರ್ ಒಪಿಯ ಕಾಂಜಿಯಾ ಮಿಡಲ್ ಸ್ಕೂಲ್ ಬಳಿ ಕಾರು ನಿಯಂತ್ರಣ ತಪ್ಪಿ ಹೊಂಡಕ್ಕುರುಳಿದೆ. ಗಾಯಾಳುಗಳ ಚೀರಾಟ ಕೇಳಿ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಆಗಮಿಸಿದ ವೇಳೆ ಘಟನೆ ಬಗ್ಗೆ ಗೊತ್ತಾಗಿದೆ. ತತ್ಕ್ಷಣ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಚಾಲಕ ಅತಿ ವೇಗದಿಂದ ಕಾರು ಚಲಾಯಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮಾಹಿತಿ ಲಭಿಸಿದ ಕೂಡಲೇ ಸ್ಥಳೀಯ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.