ಶ್ರೀನಗರ, ಜೂ 11 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಾರಾಮುಲ್ಲಾ ಹೆದ್ದಾರಿಯಲ್ಲಿ ಪತ್ತೆಯಾದ ಸ್ಪೋಟಕವನ್ನು (ಐಇಡಿ) ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದು, ಸಂಭಾವ್ಯ ಭಾರಿ ಅಪಾಯವೊಂದನ್ನು ತಪ್ಪಿಸಿದ್ದಾರೆ.
ಸಂಗ್ರಾಮದ ಪುಟ್ಖಾ ಎಂಬಲ್ಲಿ ಸ್ಪೋಟಕ ಪತ್ತೆಯಾಗಿದೆ. ಸೇನೆಯ 5 ರಾಷ್ಟ್ರೀಯ ರೈಫಲ್ಸ್ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಪೋಟಕವನ್ನು ವಶಪಡಿಸಿಕೊಂಡಿದ್ದಾರೆ.
ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಸಂಗ್ರಾಮ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಸ್ಪೋಟಕದ ನಿಷ್ಕ್ರಿಯ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.