ಬೆಂಗಳೂರು, ಜೂ 11 (DaijiworldNews/HR): ಸಬ್ಸಿಡಿಗಳಿಗೆ ಕತ್ತರಿ, ಕಾಪೆರ್ರೇಟ್ ಬಂಡವಾಳಿಗರ ಜೊತೆ ದೋಸ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಎಂಟು ವರ್ಷಗಳ ಮಹಾಸಾಧನೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಯು ಉದ್ದೇಶ ಪೂರ್ವಕವಾಗಿ ಜನರ ಕೈಯಲ್ಲಿ ಹಣ ಇರಬಾರದು ಎಂದು ತೀರ್ಮಾನಿಸಿಯೆ ಯೋಜನೆಗಳನ್ನು ರೂಪಿಸುತ್ತಾರೆ. ಕೇಂದ್ರ ಸರ್ಕಾರ ರೈತ ವಿರೋ ಕಾಯ್ದೆಗಳನ್ನು ತಂದು ಕೃಷಿಯನ್ನೂ ಕೂಡ ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಕೊಟ್ಟು ರೈತರನ್ನು ಸರ್ವನಾಶ ಮಾಡಲು ಹೊರಟಿತ್ತು. ಆದರೆ ರೈತರು ನಡೆಸಿದ ವಿರೋಚಿತ ಹೋರಾಟಗಳಿಂದ ಕಾಯ್ದೆಗಳನ್ನು ಕೈ ಬಿಡಬೇಕಾಯಿತು ಎಂದರು.
ಇನ್ನು ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊರೊನಾ ಇದ್ದ ಎರಡು ವರ್ಷ ಬಿಟ್ಟರೆ ಉಳಿದಂತೆ ನಿರಂತರವಾಗಿ ಸಬ್ಸಿಡಿಗಳಿಗೆ ಕತ್ತರಿ ಹಾಕುತ್ತಿದ್ದಾರೆ. 2012 ರಿಂದ 2013-14ರ ವರೆಗೆ ಜಿಡಿಪಿಯ ಶೇ.2.2 ರಿಂದ 2.4ರ ವರೆಗೆ ಸಬ್ಸಿಡಿ ನೀಡಲಾಗುತಿತ್ತು. ಈಗ ಅದರ ಪ್ರಮಾಣ ಶೇ.1ಕ್ಕಿಂತ ಕೆಳಗೆ ಇಳಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.