ಮೈಸೂರು, ಜೂ 11 (DaijiworldNews/DB): ಭವಿಷ್ಯದಲ್ಲಿ ಯಾವತ್ತೂ ಕಾಂಗ್ರೆಸ್ ಜೆಡಿಎಸ್ನೊಂದಿಗೆ ಮೈತ್ರಿಗೆ ಮುಂದಾಗುವುದಿಲ್ಲ. ಬಿಜೆಪಿ ಗೆದ್ದಿರುವುದೇ ಅವರಿಂದ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಗೆ ನಾವು ಅಭ್ಯರ್ಥಿಯನ್ನು ನಿಲ್ಲಿಸಿದ ಬಳಿಕ ಅವರು ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಯಾಕೆ ಎಂದು ಪ್ರಶ್ನಿಸಿದರು.
ಬಿಜೆಪಿ ಗೆಲುವಿಗೆ ಜೆಡಿಎಸ್ ಪಕ್ಷವೇ ಕಾರಣ. ಬಿಜೆಪಿ ಜಯ ಗಳಿಸಲಿ ಎಂಬ ಉದ್ದೇಶದಿಂದಲೇ ಅವರು ಅಭ್ಯರ್ಥಿಯನ್ನುಹಾಕಿರುವುದು. ಮುಂದೆಂದೂ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.