ಮುಂಬೈ, ಜೂ 11 (DaijiworldNews/DB): ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ನವಿ ಮುಂಬೈನಲ್ಲಿ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬಂದಿ, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.