ನವದೆಹಲಿ, ಜೂ 11 (DaijiworldNews/HR): ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರತಿಮೆಯ ತಲೆ ಕತ್ತರಿಸುವುದನ್ನು ತೋರಿಸುವ ವೀಡಿಯೊ ಪೋಸ್ಟ್ ಮಾಡಿದ್ದ ಕಾಶ್ಮೀರದ ಯೂಟ್ಯೂಬರ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಈ ವಿಡಿಯೋ ಸಾರ್ವಜನಿಕರಲ್ಲಿ ಭಯ ಮತ್ತು ಆತಂಕ ಮೂಡಿಸಿರುವುದರಿಂದ ಕಾಶ್ಮೀರ ಮೂಲದ ಯೂಟ್ಯೂಬರ್ ಫೈಸಲ್ ವಾನಿ ಅವರನ್ನು ಬಂಧಿಸಲಾಗಿದೆ.
ಇನ್ನು ಈ ವಿಡಿಯೋ ಸಾರ್ವಜನಿಕ ನೆಮ್ಮದಿಗೆ ವಿರುದ್ಧವಾಗಿದೆ ಮತ್ತು ಸಾಮಾನ್ಯವಾಗಿ ಸಾರ್ವಜನಿಕರಲ್ಲಿ ಭಯ ಮತ್ತು ಆತಂಕವನ್ನು ಉಂಟುಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.