ಕೋಲ್ಕತ್ತ, ಜೂ 11 (DaijiworldNews/HR): ಪ್ರವಾದಿ ಅವಹೇಳನ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಗಲಭೆ ನಡೆಯುತ್ತಿದ್ದ ಹೌರಾ ಜಿಲ್ಲೆಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು, ಕಲ್ಲು ಹಾಗೂ ಇಟ್ಟಿಗೆಗಳನ್ನು ಎಸೆದಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
ಇನ್ನು ಪಂಚ್ಲಾ ಮಾರುಕಟ್ಟೆಯ ಸಮೀಪದ ಕೆಲ ಅಂಗಡಿ ಹಾಗೂ ಮನೆಗಳನ್ನು ದರೋಡೆ ಮಾಡಲಾಗಿದೆ. ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.