ನವದೆಹಲಿ, 12 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 8,582 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 4 ಜನರು ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 5,24,761ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 44513 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4,435 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,52,743 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.