ಬೆಂಗಳೂರು, ಜೂ 12 (DaijiworldNews/DB): ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರಿನಿಗೆ ವ್ಯಕ್ತಿಯೊಬ್ಬನಿಂದ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ.
ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗುತ್ತಿದ್ದು, ದಿ. ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮುನ್ಮಿತ್ ರೈ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಗೃಹ ಸಚಿವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಈ ಆರೋಪವನ್ನು ತಳ್ಳಿ ಹಾಕಿರುವ ಮುನ್ಮಿತ್ ರೈ ತಾನು ವಿದೇಶದಲ್ಲಿದ್ದು, ಅಂತಹ ಯಾವುದೇ ಬೆದರಿಕೆ ಒಡ್ಡಿರಲಿಲ್ಲ ಎಂದು ಹೇಳಿದ್ದಾರೆ.
ಗುಣರಂಜನ್ ಶೆಟ್ಟಿ ಹಾಗೂ ಮುನ್ಮಿತ್ ರೈ ಇಬ್ಬರೂ ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದರು. ಇದೀಗ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.