ಬೆಳಗಾವಿ, ಜೂ 12 (DaijiworldNews/HR): ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿ ಎಂದು ಗುರುತಿಸಲಾಗಿದೆ.
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ಮುಸ್ಲೀಂ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ನೂಪುರ್ ಶರ್ಮಾ ಪ್ರತಿಕೃತಿಗೆ ಸೀರೆ ಉಡಿಸಿ, ಭಾವಜಿತ್ರವನ್ನು ಅಂಟಿಸಿ ಅದನ್ನು ಗಲ್ಲಿಗೇರಿಸಿದ್ದರು.