ಕೋಲ್ಕತ್ತ, ಜೂ 12 (DaijiworldNews/DB): ಪಶ್ಚಿಮ ಬಂಗಾಳದಲ್ಲಿ ಬಿಸಿಲಿನ ಶಾಖದಿಂದಾಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಭಕ್ತರು ಅಸುನೀಗಿದ್ದಾರೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾನೀಹಾಟಿಯ ಇಸ್ಕಾನ್ ದೇವಸ್ಥಾನದ ದಂಡ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಹೆಚ್ಚಿನ ಜನಸಂದಣಿ ಮತ್ತು ಅತಿಯಾದ ಬಿಸಿಲಿನಿಂದಾಗಿ ಮೂವರು ಭಕ್ತರು ಅಸ್ವಸ್ತಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೂವರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ಧ್ರುವಜ್ಯೋತಿ ದೇವ್ ತಿಳಿಸಿದ್ದಾರೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿದ್ದಾರೆ. ಭಕ್ತರ ಕುಟುಂಬಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುವುದಾಗಿ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.