ಬೆಂಗಳೂರು, ಜೂ 12 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದಲ್ಲಿ ದ್ವೇಷ ಹರಡುವಿಕೆ ವಿಚಾರದ ಬಗ್ಗೆ ಮೌನವನ್ನು ಮುರಿಯಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದ ಅಭಿವೃದ್ಧಿ ಹಾಗೂ ವಿದೇಶಗಳೊಂದಿಗಿನ ಉತ್ತಮ ಬಾಂಧವ್ಯವು ಇಂದು ಅಪಾಯದ ಸ್ಥಿತಿಯಲ್ಲಿರುವ ಬಗ್ಗೆ ನರೇಂದ್ರ ಮೋದಿ ಮಾತನಾಡಬೇಕು. ತಮ್ಮ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಧ್ರುವೀಕರಣ ಮತ್ತು ಪ್ರಗತಿಗಳ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವ ಸಂದರ್ಭ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ.