ಬೆಂಗಳೂರು, ಜೂ 13 (DaijiworldNews/HR): ಕರಾವಳಿ ಸೇರಿದಂತೆ ರಾಜ್ಯದದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂ. 15 ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16 ರಿಂದ ಮಳೆ ಬರಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.