ಪುಣೆ, ಜೂ 13 (DaijiworldNews/HR): ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಂತೋಷ್ ಜಾಧವ್ ನನ್ನು ಪುಣೆ ಜಿಲ್ಲೆಯ ಮಾಂಚರ್ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಸಿಧು ಮೂಸೆವಾಲ ಹತ್ಯೆ ತನಿಖೆಯಲ್ಲಿ ಜಾಧವ್ ಮತ್ತು ನಾಗನಾಥ್ ಸೂರ್ಯವಂಶಿಯ ಹೆಸರು ಕೇಳಿಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇನ್ನು ಜಾಧವ್ ಪತ್ತೆಗಾಗಿ ಪುಣೆ ಗ್ರಾಮಾಂತರ ಪೊಲೀಸರು ಕಳೆದ ವಾರ ಗುಜರಾತ್ ಮತ್ತು ರಾಜಸ್ಥಾನಕ್ಕೆ ಹಲವು ತಂಡಗಳನ್ನು ಕಳುಹಿಸಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.