ತುರಾ (ಮೇಘಾಲಯ), ಜೂ 13 (DaijiworldNews/DB): ಮೇಘಾಲಯದ ತುರಾದಲ್ಲಿ ಸೋಮವಾರ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ.
ತುರಾದಿಂ ಈಶಾನ್ಯಕ್ಕೆ 43 ಕಿಲೋ ಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಹೆಚ್ಚಿನ ಮಾಹಿತಿ ನಿರೀಕ್ಷಿಸಾಗುತ್ತಿದೆ.
ಭೂಕಂಪ ಸಂಭವಿಸಿರುವ ಬಗ್ಗೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಟ್ವೀಟ್ ಮಾಡಿ ಮಾಹಿತಿ ನೀಡಿದೆ.