ರಾಜ್ಕೋಟ್, ಜೂ 13 (DaijiworldNews/HR): ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಪ್ರಿಂಟ್ ಇರುವ ಪೋಸ್ಟರ್ಗಳನ್ನು ಅಂಟಿಸಿದ್ದಕ್ಕಾಗಿ ಎಂಟು ಜನರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಪೋಸ್ಟರ್ಗಳನ್ನು ಅಂಟಿಸಿ, ಉತ್ತರ ಪ್ರದೇಶ ಮತ್ತು ಜಾರ್ಖಂಡ್ನಲ್ಲಿ ಏನಾಯಿತು ಎಂಬುದನ್ನು ಖಚಿತಪಡಿಸಿಕೊಳ್ಳಲು ಮುಸ್ಲಿಮರನ್ನು ಕೇಳುವ ಸಂದೇಶವನ್ನು ವಾಟ್ಸಾಪ್ನಲ್ಲಿ ಪ್ರಸಾರ ಮಾಡುವ ಮೂಲಕ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನು ಕಳೆದ 2 ರಿಂದ 3 ದಿನಗಳಲ್ಲಿ, ವಾಟ್ಸಾಪ್ ವಿಡಿಯೊ ವೈರಲ್ ಆಗಿದ್ದು, ಇದರಲ್ಲಿ ಇಬ್ಬರು ವ್ಯಕ್ತಿಗಳು ಶೂ ಪ್ರಿಂಟ್ ಚಿಹ್ನೆಯೊಂದಿಗೆ ನೂಪುರ್ ಶರ್ಮಾ ಅವರ ಪೋಸ್ಟರ್ಗಳನ್ನು ಅಂಟಿಸಿದ್ದಾರೆ.
ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆಯ ವಿರುದ್ಧ ಪ್ರತಿಭಟಿಸಿ ದೇಶ ವಿದೇಶದಲ್ಲಿ ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರ ಬಂಧನಕ್ಕೆ ಒತ್ತಾಯ ಹೆಚ್ಚಾಗಿದೆ.