ನವದೆಹಲಿ, ಜೂ 13 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮತ್ತು ಸಚಿವ ಸತ್ಯೇಂದರ್ ಜೈನ್ಗೆ ರೂಸ್ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಸತ್ಯೇಂದ್ರ ಜೈನ್ ಅವರನ್ನು ಮೇ 30ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧಿಸಿದ್ದು, ಬಳಿಕ ಮೇ 31ರಂದು ವಿಚಾರಣಾ ನ್ಯಾಯಾಲಯವು ಸತ್ಯೇಂದರ್ ಜೈನ್ ಇಡಿ ಕಸ್ಟಡಿಗೆ ಕಳುಹಿಸಿತ್ತು.
ಇನ್ನು ಸತ್ಯೇಂದರ್ ಅವರು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ನಾಳೆ(ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ವಿಚಾರಣೆ ನಡೆಯಲಿದೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದರ್ ಜೈನ್ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಯನ್ನು ರೂಸ್ ಅವೆನ್ಯೂ ನ್ಯಾಯಾಲಯವು ಜೂನ್ 13 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸಿತ್ತು.