ನವದೆಹಲಿ, ಜೂ 13 (DaijiworldNews/HR): ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸುವ ಮೂಲಕ ಭ್ರಷ್ಟಾಚಾರದ ಬೆಂಬಲಕ್ಕೆ ನಿಂತಿದೆ ಎಂದು ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದು, ಇದನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ಸ್ಮೃತಿ ಇರಾನಿ, ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸುವ ಮೂಲಕ ಭ್ರಷ್ಟಾಚಾರದ ಬೆಂಬಲಕ್ಕೆ ನಿಂತಿದೆ. ಜೈಲಿನಿಂದ ಜಾಮೀನಿನ ಮೇಲೆ ಬಂದವರು ದೆಹಲಿ ಸುತ್ತುವರೆಯಲು ಬನ್ನಿ ಎಂದು ಘೋಷಿಸಿದ್ದಾರೆ. ತನಿಖಾ ಸಂಸ್ಥೆಯ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಆಡಳಿತದ ಸಚಿವರನ್ನು ಆಹ್ವಾನಿಸಲಾಗಿದೆ. ಏಜೆನ್ಸಿಯ ಮೇಲೆ ಈ ರೀತಿ ಒತ್ತಡಕ್ಕೆ ನೀವು ಯಾವ ಹೆಸರನ್ನು ನೀಡುತ್ತೀರಿ ಎಂದಿದ್ದಾರೆ.
ಇನ್ನು ಯಾರೂ ಸಹ ಕಾನೂನಿಗಿಂತ ದೊಡ್ಡವರಲ್ಲ, ರಾಹುಲ್ ಗಾಂಧಿ ಕೂಡ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.