ನವದೆಹಲಿ, ಜೂ 13 (DaijiworldNews/DB): ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಸಂಸದ ಪ್ರವೇಶ್ ವರ್ಮಾ ಮೇಲೆ ದ್ವೇಷ ಭಾಷಣ ಆರೋಪದ ಮೇಲೆ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
2020ರಲ್ಲಿ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ವಿರೋಧಿ ಪ್ರತಿಭಟನೆಯ ಸಮಯದಲ್ಲಿ ನಾಯಕರಿಬ್ಬರು ದ್ವೇಷ ಭಾಷಣ ಮಾಡಿದ್ದು, ಅವರ ಮೇಲೆ ಎಫ್ಐಆರ್ ದಾಖಲಿಸುವಂತೆ ಕೋರಿ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾ ಮಾಡಿ ಇಬ್ಬರು ನಾಯಕರಿಗೆ ಬಿಗ್ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರು ಅರ್ಜಿ ವಜಾಗೊಳಿಸಿದರು.