ಅಹಮದಾಬಾದ್, ಜೂ 13 (DaijiworldNews/HR): ಭಾರೀ ಸಿಡಿಲು, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿರುವ ಘಟನೆ ಗುಜರಾತ್ನ ಮೋರ್ಬಿ ಜಿಲ್ಲೆಯಲ್ಲಿ ನಡೆದಿದೆ.
ನಿದ್ರಿಸುತ್ತಿದ್ದ ವೇಳೆ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದ್ದು, ಮಹಿಳೆ, ಆಕೆಯ ಪತಿ ಮತ್ತು ಸಹೋದರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಘಟನೆ ಬಗ್ಗೆ ಕೆಲವು ಸ್ಥಳೀಯರು ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೋರ್ಬಿ ಆಸ್ಪತ್ರೆಗೆ ರವಾನಿಸಿರುವುದಾಗಿ ವರದಿಯಾಗಿದೆ.