ಬೆಂಗಳೂರು, ಜೂ 13 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ ತುರ್ತುಸಭೆ ನಡೆದಿದೆ.
ರಾಜ್ಯದಲ್ಲಿ ವಾರದ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಳವಾದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಕೊರೊನಾ ತಡೆಗಟ್ಟುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದ್ದು, ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್ ಬಗ್ಗೆ ಹೆಚ್ಚು ಒತ್ತು ನೀಡಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ, ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು, ಕೇರಳ, ಮಹಾರಾಷ್ಟ್ರ, ತಮಿಳುನಾಡು ಗಡಿ ಭಾಗಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಿಸಿ ಪ್ರಯಾಣಿಕರ ಮೇಲೆ ನಿಗಾ ಇಡುವುದರ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಇನ್ನು ಎರಡನೆ ಡೋಸ್ ವ್ಯಾಕ್ಸಿನ್ ಹಾಗೂ ಬೂಸ್ಟರ್ ಡೋಸ್ ಪಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಶಾಲಾ-ಕಾಲೇಜು ಮಟ್ಟದಲ್ಲಿ ಮೊದಲನೆ ಡೋಸ್ ಕಂಪ್ಲೀಟ್ ಮಾಡಲು ಆರೋಗ್ಯ ಇಲಾಖೆ ಅಕಾರಿಗಳಿಗೆ ಸೂಚನೆ ನೀಡಲಾಯಿತು.