ಬೆಂಗಳೂರು, ಜೂ 13 (DaijiworldNews/SM): `ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ ಜಾಗತಿಕ ಮಟ್ಟದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಅತಿದೊಡ್ಡ ಉಪಕ್ರಮವಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕ ಆರೋಗ್ಯ ಸೇವೆ ನೀಡುವ ಗುರಿಯುಳ್ಳ `ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ (ಎಬಿಡಿಎಂ) ಕಾರ್ಯಕ್ರಮ ಜಾಗತಿಕ ಮಟ್ಟದ ಅತ್ಯಂತ ದೊಡ್ಡ ಉಪಕ್ರಮವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದು ಆರೋಗ್ಯ ಕ್ಷೇತ್ರದಲ್ಲಿರುವ ಕಂದಕಗಳನ್ನು ನಿವಾರಿಸುತ್ತಿದೆ. ಸುಸ್ಥಿರ ಮಾದರಿ ಆರೋಗ್ಯ ವ್ಯವಸ್ಥೆಯನ್ನು ಸೃಷ್ಟಿಸಲಿದೆ ಎಂದು ತಿಳಿಸಿದ್ದಾರೆ.
`ಆಯುಷ್ಮಾನ್ ಭಾರತ ಡಿಜಿಟಲ್ ಮಿಷನ್’ ಸಮಾವೇಶದಲ್ಲಿ ಮಾತನಾಡಿದ ಅವರು, `ಬೆಂಗಳೂರೊಂದರಲ್ಲೇ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ 7,500 ನವೋದ್ಯಮಗಳಿವೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ ರಾಜ್ಯವಾಗಿದೆ' ಎಂದರು.