ನವದೆಹಲಿ, ಜೂ 14 (DaijiworldNews/SM): ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಚಟುವಟಿಕೆ ತೀವ್ರಗೊಂಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಡರಂಗದ ನಾಯಕರು ಮಂಗಳವಾರ ದೆಹಲಿಯಲ್ಲಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.
ಜುಲೈ 18 ರ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯ ಕುರಿತು ಒಮ್ಮತದ ನಿರ್ಧಾರ ಕೈಗೊಳ್ಳಲು ಮಮತಾ ಬ್ಯಾನರ್ಜಿ ಕರೆದಿರುವ ಪ್ರತಿಪಕ್ಷಗಳ ಸಭೆಗೆ ಒಂದು ದಿನ ಮೊದಲು ಉಭಯ ನಾಯಕರು ಭೇಟಿಯಾಗಿದ್ದು, ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವಂತೆ ಶರದ್ ಪವಾರ್ ಅವರ ಮನವೊಲಿಸಲಾಗುತ್ತಿದೆ.