ಬೆಂಗಳೂರು, ಜೂ 16 (DaijiworldNews/HR): ಜಾರಿ ನಿರ್ದೇಶನಾಲಯದ ಕ್ರಮ ಮತ್ತು ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಇಂದು ಕರ್ನಾಟಕ ಕಾಂಗ್ರೆಸ್ ನಾಯಕರು ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಡಿ.ಕೆ ಶಿವಕುಮಾರ್, ಇಂದು ಕಾಂಗ್ರೆಸ್ ಕಚೇರಿಯಿಂದ ರಾಜಭವನದವರೆಗೆ ಮೆರವಣಿಗೆ ಮೂಲಕ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ಕಾಂಗ್ರೆಸ್ನ ನೂರಾರು ಕಾರ್ಯಕರ್ತರ ಜತೆ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.
ಇನ್ನು ಕಾಂಗ್ರೆಸ್ ಕಾರ್ಯಕರ್ತರು ಕೇಸುಗಳಿಗೆ ಹೆದರಿ ಜೈಲಿಗೆ ಹೋಗುವುದಿಲ್ಲ. ಅನ್ಯಾಯದ ವಿರುದ್ಧ ನಿರಂತರ ಪ್ರತಿಭಟನೆ ನಡೆಸುತ್ತೇವೆ. ದೇಶದಲ್ಲಿ ಸದ್ಯ ಬ್ರಿಟಿಷರ ಆಡಳಿತಕ್ಕಿಂತ ಹದಗೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.