ರಾಯಚೂರು, ಜೂ 16 (DaijiworldNews/HR): ರಾಯಚೂರಿನಲ್ಲಿ ಕಲುಷಿತ ನೀರು ಸೇವನೆಗೆ ಇಂದು ಮತ್ತೋರ್ವರು ಬಲಿಯಾಗಿದ್ದು, ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಮಚ್ಚಿಬಜಾರ್ ನ ಶಮೀಮ್ ಬೇಗಂ (48) ಎಂಬ ಮಹಿಳೆ ಕಲುಷಿತ ನೀರಿನಿಂದ ಅನಾರೋಗ್ಯಕ್ಕೀಡಾಗಿ ಇಂದು ಮೃತಪಟ್ಟಿದ್ದಾರೆ.
ಇನ್ನು ವಾಂತಿ-ಭೇದಿಯಿಂದ ಬಳಲುತ್ತಿದ್ದ ಶಮೀಮ್ ಬೇಗಂ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಇದೀಗ ಮೃತಪಟ್ಟಿದ್ದಾರೆ.
ಕಲುಷಿತ ನೀರು ಸೇವನೆಯಿಂದ ರಾಯಚೂರಿನಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜನರಲ್ಲಿ ಆತಂಕ ಮೂಡಿದೆ.