ರಾಂಚಿ, ಜೂ 16 (DaijiworldNews/DB): ಕೇಂದ್ರ ಸರ್ಕಾರದ ’ಅಗ್ನಿಪಥ್’ ಯೋಜನೆ ವಿರೋಧಿಸಿ ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರವಾಯು ಸಿಡಿಸಿದ್ದಾರೆ.
ಪ್ರತಿಭಟನಾಕಾರರು ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದು ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಸೇನಾ ಆಕಾಂಕ್ಷಿಗಳು ಬಿಹಾರದಲ್ಲಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ರೈಲು ಮತ್ತು ರಸ್ತೆ ಸಂಚಾರಕ್ಕೂ ಅಡ್ಡಿಪಡಿಸುತ್ತಿದ್ದಾರೆ. ಭಭುವಾ ರಸ್ತೆಯಲ್ಲಿರುವ ರೈಲು ನಿಲ್ದಾಣದಲ್ಲಿ ರೈಲಿನ ಗಾಜುಗಳನ್ನು ಒಡೆದು ಒಂದು ಬೋಗಿಗೆ ಬೆಂಕಿ ಹಚ್ಚಿದ ಘಟನೆಯೂ ನಡೆದಿದೆ. ಅರಾಹ್ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಹೊಸ ನೇಮಕಾತಿ ಯೋಜನೆಗಳನ್ನು ತಿರಸ್ಕರಿಸಿ ಎಂಬ ಘೋಷಣೆಗಳನ್ನೂ ಕೂಗುತ್ತಿದ್ದಾರೆ. ಪೀಠೋಪಕರಣಗಳಿಗೆ, ರೈಲು ಹಳಿಗಳ ಮೇಲೆ ಬೆಂಕಿ ಹಚ್ಚುವಂತಹ ಘಟನೆಗಳೂ ನಡೆಯುತ್ತಿವೆ.
ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿರುವುದನ್ನು ಮತ್ತು ಪ್ರತಿಭಟನಾಕಾರರ ಗುಂಪು ಚದುರಿಸಲು ಪೊಲೀಸರು ಅಶ್ರಯವಾಯು ಶೆಲ್ ದಾಳಿ ನಡೆಸಿದ್ದಾರೆ. ಬೆಂಕಿ ನಂದಿಸಲು ರೈಲ್ವೆ ಸಿಬ್ಬಂದಿ ಅಗ್ನಿ ಶಾಮಕಗಳನ್ನು ದಳವನ್ನೂ ಸ್ಥಳಕ್ಕೆ ಕರೆಸಿದ್ದಾರೆ.