ಗದಗ, ಜೂ 16 (DaijiworldNews/HR): ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಎಆರ್ ಹೆಡ್ ಕಾನ್ಸ್ ಟೇಬಲ್ ಓರ್ವರು ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮುಖ್ಯಪೇದೆಯನ್ನು ಕೆ.ಎಸ್.ಕೊಪ್ಪದ ಎಂದು ಗುರುತಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಏಕಾಏಕಿ ತಮಗೆ ತಾವೇ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಕೌಟುಂಬಿಕ ಕಲಹದಿಂದ ಹಲವು ದಿನಗಳಿಂದ ಕೊಪ್ಪದ ಖಿನ್ನತೆಗೆ ಒಳಗಾಗಿದ್ದು, ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.