ಬೆಂಗಳೂರು, ಜೂ 16 (DaijiworldNews/MS) : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭಿಸಿದೆ.
ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆರಂಭಕ್ಕೂ ಮುನ್ನ ಅವರು ಕೆಪಿಸಿಸಿ ಕಚೇರಿ ಮುಂದೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, " ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರಿಗೆ ಕಿರುಕುಳ ಕೊಡುತ್ತಿತು ಈ ಮೂಲಕ ಸೇಡಿನ ರಾಜಕಾರಣ ಮಾಡುವ ಕೊಡುವ ಕೆಟ್ಟ ಹಾದಿ ಹಿಡಿದಿದೆ. ಹೀಗಾಗಿ ಇದರ ವಿರುದ್ಧದ ಹೋರಾಟಕ್ಕೆ ಬಿಜೆಪಿಯೇತರ ಎಲ್ಲ ಪಕ್ಷಗಳೂ ಒಟ್ಟಾಗಬೇಕು" ಎಂದು ಕರೆ ನೀಡಿದ್ದಾರೆ.
"ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ಕೇಡುಗಾಲ ಬಂದಿದ್ದು, ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಎಲ್ಲರೂ ಒಟ್ಟಾಗಿ ಸೋಲಿಸಬೇಕು . ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು ಗಾಳಿಗೆ ತೂರಿ ಆಡಳಿತ ನಡೆಸುತ್ತಿದ್ದು ಈ ನಡವಳಿಕೆ ವಿರುದ್ಧ ದೇಶದಾದ್ಯಂತ ಹೋರಾಟ ಆರಂಭವಾಗಬೇಕು" ಎಂದು ಹೇಳಿದ್ದಾರೆ.
ಬೆಳಗ್ಗೆ 11.15ರ ವೇಳೆಗೆ ಕೆಪಿಸಿಸಿ ಕಚೇರಿಯಿಂದ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆರಂಭವಾಗಿದ್ದು ಕಾಂಗ್ರೆಸ್ ನಾಯಕರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರು ನೆರೆದಿದ್ದು ಈ ಹಿನ್ನಲೆ ನಗರದ ಹಲವೆಡೆ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ.