ಬೆಂಗಳೂರು, ಜೂ 16 (DaijiworldNews/HR): ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಕಾಂಗ್ರೆಸ್ನಾಯಕರಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದು, ಮಾರ್ಗಮಧ್ಯೆಯೇ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿಲ್ಲದಿದ್ದರೂ ರಾಹುಲ್ ಗಾಂಧಿಯನ್ನು ಪ್ರತಿ ದಿನ 10 ಗಂಟೆಗೂ ಹೆಚ್ಚು ಕಾಲ 3 ದಿನ ವಿಚಾರಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ, ಆದಾಯ ತೆರಿಗೆ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇನ್ನು ಪ್ರತಿಭಟನೆಯನ್ನು ಪೊಲೀಸರು ತಡೆಯುತ್ತಿದ್ದಂತೆ ಸಿದ್ದರಾಮಯ್ಯ, ಡಿ,ಕೆ.ಶಿವಕುಮಾರ್ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ಅವರಿಬ್ಬರನ್ನು ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.