ಹೈದರಾಬಾದ್, ಜೂ16(DaijiworldNews/DB): ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರ ಕಾಲರ್ ಹಿಡಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಸದ್ಯ ನಾಯಕಿಯ ನಡೆಗೆ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ.
ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರೇ ಕರ್ತವ್ಯ ನಿರತ ಪೊಲೀಸ್ ಸಿಬಂದಿಯ ಕಾಲರ್ ಹಿಡಿದವರು. ಪೊಲೀಸರು ಪ್ರತಿಭಟನಾಕಾರರನ್ನು ಕರೆದೊಯ್ಯುವಾಗ ರೇಣುಕಾ ಚೌಧರಿ ಅಧಿಕಾರಿಯ ಕಾಲರ್ ಹಿಡಿದಿದ್ದಾರೆ.
ಬಳಿಕ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಮಹಿಳಾ ಪೊಲೀಸರು ಅವರನ್ನು ಎಳೆದೊಯ್ದು ಪೊಲೀಸ್ ವ್ಯಾನಗ ಹತ್ತುವಂತೆ ಸೂಚಿಸಿದರು.