ಕೊಟ್ಟಿಗೆಹಾರ,ಜೂ 16 (DaijiworldNews/HR): ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಚಾರ್ಮಾಡಿ ಘಾಟ್ನ ಮಲಯ ಮಾರುತದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿದೆ.
ಇನ್ನು ಗಾಡಿ ಪಲ್ಟಿಯಾದ್ದರಿಂದ ಗಾಡಿಯಲ್ಲಿದ್ದ ಗದಗ ಮೂಲದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.