ನವದೆಹಲಿ, ಜೂ 16 (DaijiworldNews/HR): ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ನಾಳೆ(ಶುಕ್ರವಾರ) ಪುನಃ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ.
ರಾಹುಲ್ ಗಾಂಧಿ ಇಡಿಗೆ ಪತ್ರವೊಂದನ್ನು ಬರೆದಿದ್ದು, ಶುಕ್ರವಾರ ವಿಚಾರಣೆಗೆ ಬರುವಂತೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಮನವಿಯನ್ನು ಮಾಡಿದ್ದಾರೆ ಎಂದು ವರದಿಯಾಗಿದೆ.
ಇನ್ನು ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಶುಕ್ರವಾರದ ವಿಚಾರಣೆ ಮುಂದೂಡಿ ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.