ಬೆಂಗಳೂರು, ಜೂ 17 (DaijiworldNews/HR): ಕೊರೊನಾದಿಂದ ಮೃತಪಟ್ಟ ಕುಟುಂಬಸ್ಥರು ಪರಿಹಾರ ಕೋರಿ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕೊರೊನಾದಿಂದ ಮೃತಪಟ್ಟ ಎಲ್ಲಾ ವ್ಯಕ್ತಿಗಳ ಕಾನೂನು ಬದ್ಧ ವಾರಸುದಾರರಿಗೆ ಕೇಂದ್ರ ಸರ್ಕಾರದ ಎಸ್ ಡಿ ಆರ್ ಎಫ್ ಮಾರ್ಗಸೂಚಿಯನ್ವಯ 50,000 ರೂಪಾಯಿಗಳ ಪರಿಹಾರ ಧನ ವಿತರಿಸಲು ಆದೇಶಿಸಲಾಗಿದೆ.
ಇನ್ನು ಪರಿಹಾರ ಕೋರಿ ಅರ್ಜಿ ಸಲ್ಲಿಸಲು ನಿಗಧಿ ಪಡಿಸಲಾಗಿದ್ದ 60 ದಿನಗಳ ಕಾಲಮಿತಿಯನು ಜೂನ್ 30ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದು ಬಂದಿದೆ.