ಬೆಂಗಳೂರು, ಜೂ 17 (DaijiworldNews/MS): ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಏಪ್ರಿಲ್ 22 ರಿಂದ ಆರಂಭವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮೇ 18ರವರೆಗೆ ನಡೆದಿತ್ತು. ಈಗಾಗಲೇ ಮೌಲ್ಯಮಾಪನ ಹಾಗೂ ಅದಕ್ಕೆ ಸಂಬಂಧಿಸಿದ ಕೆಲಸಗಳು ಮುಕ್ತಾಯವಾಗಿ ಜೂ. 18 ರಂದು ಫಲಿತಾಂಶ ಪ್ರಕಟವಾಗಲಿದೆ.
ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ.ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.