ನವದೆಹಲಿ, ಜೂ 17 (DaijiworldNews/HR): ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆ ವಿರುದ್ಧ ದೇಶದ ವಿವಿದೆಡೆ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳದಂತೆ ಮತ್ತು ರೈಲ್ವೆ ಆಸ್ತಿಗೆ ಹಾನಿ ಮಾಡದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದಾರೆ.
ಕೇಂದ್ರದ ಹೊಸ ನೇಮಕಾತಿ ಯೋಜನೆಗೆ ಅಸಮಾಧಾನಗೊಂಡ ಪ್ರತಿಭಟನಾಕಾರರು ಇಂದು ಬಿಹಾರ ಮತ್ತು ತೆಲಂಗಾಣದಲ್ಲಿ ರೈಲುಗಳನ್ನು ಸುಟ್ಟು ಹಾಕಿದ್ದು, ಉತ್ತರ ಪ್ರದೇಶ, ಬಿಹಾರ ಮತ್ತು ತೆಲಂಗಾಣದಲ್ಲಿ ರೈಲು ನಿಲ್ದಾಣಗಳನ್ನು ಧ್ವಂಸಗೊಳಿಸಿದ್ದಾರೆ.
ಇನ್ನು ಅಗ್ನಿಪಥ್ ಪ್ರತಿಭಟನೆಗಳಿಂದ ಭಾರತೀಯ ರೈಲ್ವೇ ದೇಶಾದ್ಯಂತ ನೂರಾರು ರೈಲುಗಳನ್ನು ರದ್ದುಗೊಳಿಸಿದ್ದು, ಭಾಗಶಃ ಸ್ಥಗಿತಗೊಳಿಸಿದೆ. ಸುಮಾರು 200 ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂಸು ವರದಿಯಾಗಿದೆ.