ಬೆಂಗಳೂರು, ಜೂ 18 (DaijiworldNews/MS): ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ನಾಯಕ ಎಂ. ರಘುಪತಿ ಅವರು ಮಲ್ಲೇಶ್ವರಂ ನಿವಾಸದಲ್ಲಿ ಜೂ. 18 ರ ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ವಿಧಿವಶರಾದರು.
ಅಗಲಿದ ಎಂ.ರಘುಪತಿ ಅವರ ಪಾರ್ಥೀವ ಶರೀರವನ್ನು ಅವರ ಮಲ್ಲೇಶ್ವರಂ ನಿವಾಸದಲ್ಲಿ ಇರಿಸಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು. 1980ರಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಸಂಪುಟದಲ್ಲಿ ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದರು.
ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್ ಟಿ ರಾಮ ರಾವ್ ಗೆ ಆತ್ಮೀಯರಾಗಿದ್ದರು